Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

ಲಂಕಾ ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ: ಶಾಶ್ವತ ಪರಿಹಾರ ಕೋರಿ ಕೇಂದ್ರಕ್ಕೆ ಸ್ಟಾಲಿನ್ ಪತ್ರ

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ.

ಈ ತಿಂಗಳೊಂದರಲ್ಲೇ ರಾಜ್ಯದ 10 ಮೀನುಗಾರಿಕಾ ದೋಣಿಗಳನ್ನು ಮತ್ತು 64 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.

ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು, ಎಲ್ಲಾ ಮೀನುಗಾರರು ಮತ್ತು ಅವರ ಮೀನುಗಾರಿಕಾ ದೋಣಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್ ಅವರು, ಅಕ್ಟೋಬರ್ 28 ರಂದು ಶ್ರೀಲಂಕಾ ನೌಕಾಪಡೆಯಿಂದ 37 ಮೀನುಗಾರರು ಮತ್ತು ಅವರ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿಮಗೆ ತಿಳಿದಿರುವಂತೆ, ನಮ್ಮ ಮೀನುಗಾರರು ಜೀವನೋಪಾಯಕ್ಕಾಗಿ ಮೀನುಗಾರಿಕೆ ಚಟುವಟಿಕೆಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಅವರು ಆಗಾಗ್ಗೆ ಬಂಧನಕ್ಕೊಳಗಾಗುತ್ತಿದ್ದು, ಇದು ಅವರ ಸಮುದಾಯಕ್ಕೆ ಅಪಾರವಾದ ಸಂಕಟ ಮತ್ತು ನೋವನ್ನು ಉಂಟುಮಾಡುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ