Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಭ್ರಷ್ಟಾಚಾರದ ವಿರುದ್ಧ ಅಧಿಕಾರಿಗಳಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ಜಾಗೃತಿ ಅರಿವು ಸಪ್ತಾಹ-2023″ರ ಅಂಗವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಜಾಗೃತ ವಿಭಾಗ) ವತಿಯಿಂದ ಇಂದು ನಡೆದ ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞಾ ವಚನ ಬೋಧನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಜ್ಞಾ ವಚನ ಬೋಧನೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ