Mysore
25
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ಸೌಹಾರ್ಧತೆಗೆ ಧಕ್ಕೆಯಾಗುವ ಬ್ಯಾನರ್ ಅಳವಡಿಕೆ ಆರೋಪ: ಪಿಡಿಓ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ ಹಾಕಿದ ಬ್ಯಾನರ್ ಗಳ ಸಮೀಪ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧಕ್ಕೆ ಬಾಧಕವಾಗುವಂತಹ ಬರವಣಿಗೆ ಇರುವ ಬ್ಯಾನರ್ ಅಳವಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಸಂದೀಪ್ ರೈ ನೀಡಿರುವ ದೂರಿನ ಮೇರೆಗೆ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ.ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಅ.29 ರಂದು ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ಧತೆಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ಧ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವುದಕ್ಕೆ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!