Mysore
20
broken clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ: ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್​ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು  ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್​.ಎಸ್.ಮಲ್ಲಿಕಾರ್ಜುನ್‌ ಹೇಳಿದ್ದಾರೆ.

ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ಬಿಜೆಪಿ ಸರ್ಕಾರ ಪತನದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ, ಆದರೆ ರಾಜ್ಯ ಸರ್ಕಾರ ತುಂಬಾ ಬಲಿಷ್ಠವಾಗಿದೆ ಎಂದು ಅವರು ಹೇಳಿದರು.

ದಾವಣಗೆರೆಯ ಅಭಿವೃದ್ಧಿಗೆ ನೀಲನಕ್ಷೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನದ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬರಗಾಲದ ಕಾರಣ ಈ ವರ್ಷ ನಡೆಸುವ ಸಾಧ್ಯತೆಯಿಲ್ಲ.

ಡಿಸೆಂಬರ್‌ನಲ್ಲಿ ನಾನು ಈ ವಿಷಯವನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಮತ್ತು ಬಜೆಟ್‌ನಲ್ಲಿ ಇದಕ್ಕಾಗಿ ಸಾಕಷ್ಟು ಹಣವನ್ನು ಮೀಸಲಿಡುವಂತೆ ನೋಡಿಕೊಳ್ಳುತ್ತೇನೆ ಎಂದು ಅವರು ಹೇಳಿದರು. ನಗರದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ  ಆಗುವುದಿಲ್ಲ ಎಂದು ದಾವಣಗೆರೆ ನಿವಾಸಿಗಳಿಗೆ ಮಲ್ಲಿಕಾರ್ಜುನ ಭರವಸೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ