Mysore
34
few clouds

Social Media

ಬುಧವಾರ, 29 ಏಪ್ರಿಲ 2026
Light
Dark

ಆರೋಗ್ಯ ಕೊಡು ಎಂದು ಹಾಸನಾಂಬೆಯಲ್ಲಿ ಕೇಳಿಕೊಂಡಿದ್ದೇನೆ : ಎಚ್​​ಡಿಡಿ

ಹಾಸನ : ಸುಪ್ರಸಿದ್ಧ ಹಾಸನಾಂಬೆಯ ದೇಗುಲಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಕುಟುಂಬಸ್ಥರೋಂದಿಗೆ ದೇವಿಯ ದರ್ಶನ ಪಡೆದಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷ ಕುಟುಂಬ ಸಮೇತ ಬರ್ತೀವಿ ಎಂದು ಹೇಳಿದ್ದಾರೆ.

ದೇವಿ ವರ್ಷಕ್ಕೆ ಒಮ್ಮೆ ದರ್ಶನ ನೀಡುತ್ತಾಳೆ. ದೇವಿಯ ಗರ್ಭಗುಡಿಯೊಳಗೆ ಹಚ್ಚಿಟ್ಟ ದೀಪ ವರ್ಷ ಆದರೂ ಆರುವುದಿಲ್ಲ. ಒಂದು ವರ್ಷ ಆನಂದವಾಗಿ ಉರಿಯುತ್ತೆ ಇದು ಇತಿಹಾಸ. ಉತ್ತರದಲ್ಲಿ ವೈಷ್ಣವಿ ಇದೇ ಸ್ವರೂಪದ ದೇವರು ಎಂದರು.

ದೇಗುಲದಲ್ಲಿ ವಿದ್ಯುತ್ ದೀಪಾಲಂಕಾರ ಸೊಗಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಎಲ್ಲರ ಸಹಕಾರದಿಂದ ಉತ್ತಮವಾಗಿ ಆಯೋಜನೆ ಮಾಡಿದ್ದಾರೆ. ಆರೋಗ್ಯ ಕೊಡು ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ. ಮುಂದಿನ ಬಾರಿ ಆ ತಾಯಿ ದರ್ಶನಕ್ಕೆ ನಡೆದುಕೊಂಡು ಬರುವಷ್ಟು ಶಕ್ತಿ ನೀಡಲಿ. ಈ ಕ್ಷೇತ್ರದ ಉಸ್ತುವಾರಿ ಸಚಿವರು ರಾಜಣ್ಣ ಅಧಿಕಾರಿಗಳಿಂದ ಈ ಕಾರ್ಯಕ್ರಮ ಮಾಡಿಸಿದ್ದಾರೆ ಮುಂದಿನ ಬಾರಿ ಆರೋಗ್ಯವಾಗಿದ್ದರೆ ದರ್ಶನಕ್ಕೆ ಅವಕಾಶ ಮಾಡಿಕೊಡು ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಹಾಸನ ಜಿಲ್ಲಾಡಳಿತದ ವತಿಯಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವ ಅರ್ಪಣೆ ಮಾಡಲಾಯಿತು,ಜಿಲ್ಲಾ ಆಡಳಿತದ ಕಾರ್ಯಕ್ಕೆ ದೇವೇಗೌಡ ಅವರು ಪ್ರಶಂಸೆ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!