ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬೇಡ ಎಂದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಎಂದು ಕೆ.ಎನ್.ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಿ.ಪರಮೇಶ್ವರ್ ಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಹೇಳಿದ್ದಾರೆ.
ಪರಮೇಶ್ವರ್ ಈಗ ಗೃಹ ಸಚಿವರಾಗಿದ್ದಾರೆ. ಮುಂದೆ ಏನು ಬೇಕಾದರೂ ಆಗಬಹುದು. ಪರಮೇಶ್ವರ್ ಅವರೇ ನಿಮಗೆ ಅದೃಷ್ಟವಿದೆ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕೆ ಅಂದರೆ ಅವರಿಗೆ ಅದೃಷ್ಟ ಇದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗುತ್ತಾರೆ ಅಂದರೆ, ನಾವೆಲ್ಲಾ ಸಂತೋಷಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಎಂದು ಭಾವಿಸುತ್ತೇನೆ ಎಂದು ಮುಂದಿನ ಭವಿಷ್ಯ ನುಡಿದಿದ್ದಾರೆ.
ಇದೂವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ ಇದ್ದೆವು. ನಾವು, ಪರಮೇಶ್ವರ್ ಇಬ್ಬರು ಅವರ ಪರವಿರುತ್ತೇವೆ. ಸಿದ್ದರಾಮಯ್ಯ ಹೊರತು ಪಡಿಸಿದರೆ ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ ಎಂದು ತಿಳಿಸಿದ್ದಾರೆ.
ಎಐಸಿಸಿ ನಾಯಕರು ನಮಗೆ ಹೇಳಿದ್ದಾರೆ ಏನು ಮಾತನಾಡಬಾರದು ಅಂತ. ನಾನು ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು. ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೊಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ಮುಂದಿನ ನಿರ್ಧಾರವನ್ನು ಪ್ರಕಟಿಸಿದ್ದಾರೆ.