Mysore
21
mist

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಏಕದಿನ ವಿಶ್ವಕಪ್‌ ಟೂರ್ನಿಯಿಂದ ಪಾಂಡ್ಯ ಔಟ್: ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಚಾನ್ಸ್‌

ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಗಾಯದಿಂದ ಅಲಭ್ಯವಾಗಿದ್ದ ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್ಗೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಹಾರ್ದಿಕ್ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಬೀಳುವಂತಾಗಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಸಂದರ್ಭದಲ್ಲಿ ಕಾಲಿನ ನೋವಿಗೆ ತುತ್ತಾಗಿದ್ದರು. ಕೇವಲ ಮೂರು ಎಸೆತ ಬೌಲಿಂಗ್ ಮಾಡಿದ್ದ ಅವರು ನಂತರ ಮೈದಾನ ತೊರೆದಿದ್ದರು. ಆರಂಭದಲ್ಲಿ ಸಾಮಾನ್ಯ ಗಾಯ ಎಂದು ಭಾವಿಸಲಾಗಿತ್ತಾದರೂ ಬಳಿಕ ಗಾಯದ ತೀವ್ರತೆ ಹೆಚ್ಚಾಗಿರುವುದು ಕಂಡುಬಂದಿತ್ತು. ಹೀಗಾಗಿ ಎನ್ಸಿಎಗೆ ತೆರಳಿ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದರು.

ಹಾರ್ದಿಕ್ ಪಾಂಡ್ಯ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಿದ್ದರು. ವರದಿಯಲ್ಲಿ ಪಾಂಡ್ಯ ಕಾಲಿನಲ್ಲಿ ಯಾವುದೇ ಮುರಿತ ಕಂಡುಬರದಿದ್ದರೂ, ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡರೆ ಉತ್ತಮ ಎಂಬ ಮಾತು ಬಿಸಿಸಿಐ ಮೂಲಗಳಿಂದ ಬಂದಿತ್ತು. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧ ಅಥವಾ ಸೆಮಿ ಫೈನಲ್‍ನ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಗಾಯದ ಪ್ರಮಾಣ ದೊಡ್ಡದಿರುವ ಕಾರಣ ಹಾಗೂ ಚೇತರಿಸಿಕೊಳ್ಳಲು ಇನ್ನೂ ಸಮಯ ಬೇಕಾಗಿರುವುದರಿಂದ ಪಾಂಡ್ಯ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಇದೀಗ ಹಾರ್ದಿಕ್ ಪಾಂಡೆ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ವೇಗಿಗೆ ಅದೃಷ್ಟ ಖುಲಾಯಿಸಿದೆ ಪ್ರಸಿದ್ಧ್ ಕೃಷ್ಣ ಕೂಡ ಸುದೀರ್ಘ ಕಾಲ ಗಾಯದಿಂದ ಮೈದಾನದಿಂದ ದೂರವಾಗಿದ್ದು ಈ ವರ್ಷ ಜಸ್ಪ್ರೀತ್ ಬೂಮ್ರಾ ಜೊತೆಗೆ ಕಳೆದ ಐರ್ಲೆಂಡ್ ಪ್ರವಾಸದ ಮೂಲಕ ತಂಡಕ್ಕೆ ಕಮ್ ಬ್ಯಾಕ್‌ ಮಾಡಿದ್ದರು.

ಆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಅದಾದ ಬಳಿಕ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಂದ ಅವರು ಹೊರಗುಳಿಯುವಂತಾಗಿತ್ತು.

ಬೆಂಗಳೂರಿನ ಎನ್‍ನಿಎಗೆ ಸೇರಿಕೋಂಡಿದ್ದ ಅವರು ಸೆಮಿಫೈನಲ್ಗೂ ಮುನ್ನ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಅಸಾಧ್ಯವಾಗಿರುವ ಕಾರಣ ಇದೀಗ ಅವರು ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗುವಂತಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ