Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಿಎಂ ಬದಲಾವಣೆ ಬಗ್ಗೆ ಚರ್ಚೆ ಬೇಡ, ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಡಿಕೆ

ಬೆಂಗಳೂರು : ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.

ಸರ್ಕಾರ ರಚನೆಯಾಗಿ ಆರು ತಿಂಗಳು ಸಮೀಪಿಸುತ್ತಿರುವ ಹೊತ್ತಿನಲ್ಲಿ ಉಂಟಾದ ಗೊಂದಲಗಳಿಗೆ ತೆರೆ ಎಳೆಯುವುದು ಹಾಗೂ ಸಚಿವರನ್ನು ವಿಶ್ವಾಸಕ್ಕೆ ಪಡೆಯುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಅನ್ನು ಏರ್ಪಡಿಸಿದ್ದರು. ಈ ವೇಳೆ ಸಚಿವರಿಗೆ ಕ್ಲಾಸ್‌ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಚಿವರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೆ, ಹೇಳಿಕೆಗಳಿಂದ ಪಕ್ಷದ ವರ್ಚಸ್ಸು ಹಾಗೂ ಲೋಕಸಭಾ ಚುನಾವಣೆ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಹೇಳಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಪ್ರತಿಯೊಂದು ನಡೆಯೂ ರಾಜ್ಯ ರಾಜಕೀಯದಲ್ಲಿ ಯಾವ ರೀತಿ ಪರಿಣಾಮ ಬೀರಲಿದೆ ಎಂದು ಮನದಟ್ಟು ಮಾಡಲು ಉಭಯ ನಾಯಕರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಬಹಿರಂಗ ಹೇಳಿಕೆ ಬೇಡ: ಡಿಕೆ ಶಿವಕುಮಾರ್ : ಇದೇ ವೇಳೆ ಯಾವುದೇ ರೀತಿಯ ಅಸಮಾಧಾನ ಮತ್ತು ಗೊಂದಲದ ವಿಚಾರಗಳು ಇದ್ದರೆ ಪಕ್ಷದ ವೇದಿಕೆಯೊಳಗೆ ಮಾತನಾಡಿ. ಯಾರೂ ಸಹ ಬಹಿರಂಗವಾಗಿ ಮಾತನಾಡಬೇಡಿ. ಸುಖಾ ಸುಮ್ಮನೆ ವಿಪಕ್ಷ ನಾಯಕರಿಗೆ ಅಸ್ತ್ರ ಕೊಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿ ಹೇಳಿದ್ದಾರೆ ಎನ್ನಲಾಗಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಇದಕ್ಕೆ ಈಗ ನಿಮ್ಮ ಶ್ರಮದ ಅಗತ್ಯವಿದೆ. ಮತ್ತೊಮ್ಮೆ ನೀವು ಜಿಲ್ಲಾ ಪ್ರವಾಸ ಮಾಡಿ, ನಿಮಗೆ ಕೊಟ್ಟಿರುವ ಕೆಲಸ ಮತ್ತು ನಿಮ್ಮ ವ್ಯಾಪ್ತಿಯ ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಂಡು ಬರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ ಎಂದು ಸೇರಿದ್ದ ಸಚಿವರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

https://x.com/DKShivakumar/status/1720683934051385397?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ