Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಬಿಜೆಪಿ-ಜೆಡಿಎಸ್‌ನ 30-35 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ: ಎಂ.ಬಿ ಪಾಟೀಲ್

ಬೆಂಗಳೂರು : ಕರ್ನಾಟಕದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಸುಳಿವು ನೀಡಿದ ಕಾಂಗ್ರೆಸ್ ಸಚಿವ ಎಂಬಿ ಪಾಟೀಲ್, ಶೀಘ್ರದಲ್ಲೇ ಜೆಡಿಎಸ್‌ನ 10 ಶಾಸಕರು ಮತ್ತು ಬಿಜೆಪಿಯ 25 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ನ ಐವರು ಶಾಸಕರನ್ನು ಸಹ ಬಿಜೆಪಿ ತನ್ನತ್ತ ಸೆಳೆಯಲು ಸಾಧ್ಯವಿಲ್ಲ ಎಂದರು.

ಎಂಬಿ ಪಾಟೀಲ್ ಅವರ ಈ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅನೇಕ ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಹೇಳಿಕೊಂಡ ಬೆನ್ನಲ್ಲೇ ಪಾಟೀಲ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಡಿಕೆ ಶಿವಕುಮಾರ್‌ ಸಿಎಂ ಆಗುವುದಾದರೆ ಜೆಡಿಎಸ್‌ನ 19 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿದ ಪಾಟೀಲ್, ಇದು ನಾಟಕೀಯ ಹೇಳಿಕೆಯಾಗಿದ್ದು, ರಾಜಕೀಯದಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಆದರೆ, ಅವರ ಐವರು ಶಾಸಕರೂ ಕುಮಾರಸ್ವಾಮಿ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ. ಇದಲ್ಲದೆ, ವಿರೋಧ ಪಕ್ಷದ ಸುಮಾರು 20-25 ಶಾಸಕರು ಕಾಂಗ್ರೆಸ್‌ಗೆ ಸೇರುವ ನಿರೀಕ್ಷೆಯಿದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.

65-70 ಶಾಸಕರನ್ನು ಖರೀದಿಸುವ ಕಾರ್ಯಸಾಧ್ಯತೆ ಕುರಿತು ಪ್ರಶ್ನಿಸಿದ ಅವರು, ಬಿಜೆಪಿ ತಮ್ಮ ಸದಸ್ಯರೊಬ್ಬರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದರೆ, ಅವರ 25 ಶಾಸಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದರು.

ನಮ್ಮ ಪಕ್ಷದಲ್ಲಿ ಶಾಸಕರ ಸಂಖ್ಯೆ ಒಟ್ಟು 150-160 ರಷ್ಟಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ಪರಿಣಾಮಕಾರಿ ವಿರೋಧ ಪಕ್ಷದ ನಾಯಕನ ನೇಮಿಸುವಲ್ಲಿನ ಬಿಜೆಪಿ ಸದಸ್ಯರ ಸಾಮರ್ಥ್ಯವನ್ನು ಪ್ರಶ್ನಿಸಿದರು.

ಆಡಳಿತಾರೂಢ ಕಾಂಗ್ರೆಸ್‌ನಲ್ಲಿನ ಗುಂಪುಗಾರಿಕೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಹಗ್ಗಜಗ್ಗಾಟದ ನಡುವೆ, ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಒಂದು ವೇಳೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಬಯಸಿದರೆ, 19 ಜೆಡಿಎಸ್ ಶಾಸಕರ ಬೆಂಬಲ ನೀಡಲಾಗುವುದು ಎಂದು ಭರವಸೆ ನೀಡಿದ್ದರು.

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ನಾನು ಆ ಸ್ಥಾನಕ್ಕೇರುವ ಆತುರದಲ್ಲಿಲ್ಲ. ನಾವು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ನಾವು ಉತ್ತಮ ಆಡಳಿತವನ್ನು ನೀಡಬೇಕಾಗಿದೆ. ಮುಖ್ಯಮಂತ್ರಿಯಾಗಲು ನನಗೆ ಆತುರವಿಲ್ಲ. ನಾನು ಯಾರ ಮುಂದೂ ಈ ಬಗ್ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದ ನಾಯಕತ್ವದ ಮುಂದೆಯೂ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ