Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಡಿಕೆಶಿ ಪ್ರಕರಣ : ಸುಪ್ರಿಂನಿಂದ ಮತ್ತೆ ಹೈ ಕೋರ್ಟ್‌ ಅಂಗಳಕ್ಕೆ

ನವದೆಹಲಿ : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆಯನ್ನು ರದ್ದುಗೋಳಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಮತ್ತೆ ಹೈ ಕೋರ್ಟ್ ಗೆ ವರ್ಗಾವಣೆ ಮಾಡಿದೆ.

ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್‌ ನಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ವಕೀಲರು,ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ,ಆದರೆ ವಿಭಾಗಿಯ ಪೀಠ ತಡೆ ನೀಡಿತ್ತು.ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡರು.

ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಹೈಕೋರ್ಟ್‌ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರುಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡಿದರು.ಈ ಮೂಲಕ ಪ್ರಕರಣ ಮತ್ತೊಮ್ಮೆ ಹೈ ಕೋರ್ಟ್‌ ಅಂಗಳ ತಲುಪಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ