Mysore
25
scattered clouds

Social Media

ಶನಿವಾರ, 31 ಜನವರಿ 2026
Light
Dark

ಹಾಸನಾಂಬಾ ದೆವಾಲಯದಲ್ಲಿ ವಿದ್ಯುತ್‌ ಅವಘಡ

ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ.

ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬ್ಯಾರಿಕೇಡ್‌ ಗೆ ವಿದ್ಯುತ್‌ ಪ್ರವಹಿಸಿದೆ.ಈ ವೇಳೆ ಸ್ಥಳದಲ್ಲಿದ್ದ ಭಕ್ತಾದಿಗಳಿಗೂ ಕೂಡ ವಿದ್ಯುತ್‌ ತಗುಲಿದ್ದು,ಹಲವರಿಗೆ ಸಣ್ಣ ಪುಟ್ಟ ಗಾಯಗಳಾವೆ,ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಇನ್ನು ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!