Mysore
25
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ: ಡಿ.ಕೆ ಶಿವಕುಮಾರ್

ಬೆಂಗಳೂರು : ನಮ್ಮ ಮೆಟ್ರೋ ಸಂಚಾರವನ್ನು ಬಿಡದಿವರೆಗೆ ವಿಸ್ತರಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬಿಡದಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆಯ ತಾಂತ್ರಿಕ ತರಬೇತಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆ ಆಟೋಮೊಬೈಲ್ ಕ್ಷೇತ್ರದಲ್ಲಿ ಉತ್ತಮ ಹೆಸರುಗಳಿಸಿದ್ದು, ಉತ್ಪಾದನಾ ವಲಯದಲ್ಲಿ ಸಾಕಷ್ಟು ಬದಲಾವಣೆ ತಂದಿದೆ.

ಕರ್ನಾಟಕ ರಾಜ್ಯದೊಂದಿಗೆ ವಿವಿಧ ಹೂಡಿಕೆ ಮಾಡುವ ಮೂಲಕ ಟೊಯೊಟಾ ಕಿರ್ಲೋಸ್ಕರ್‌ ಸಂಸ್ಥೆ ತಂತ್ರಜ್ಞಾನ ಹಾಗೂ ಹೊಸ ಉದ್ಯಮ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದೆ. ಈ ಸಂಸ್ಥೆಯಿಂದ ಬಿಡದಿಯಲ್ಲಿ ಸ್ಥಾಪಿತವಾದ ತಾಂತ್ರಿಕ ತರಬೇತಿ ವಿಭಾಗ ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸಿ, ಅವರ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಲಿದೆ. ಬಿಡದಿಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!