Mysore
22
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಬಿಜೆಪಿಯಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ : ಸಿ.ಟಿ ರವಿ

ಬೆಂಗಳೂರು : ಬಿ.ಎಸ್‌ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ.

ಪಕ್ಷ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಪಕ್ಷದ ವೈಚಾರಿಕ ಬದ್ಧತೆ ಜೊತೆಗೆ ಪಕ್ಷವನ್ನು ಬೆಳೆಸುವ ಬೆಳೆಸಿ, ವಿಸ್ತರಿಸಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನವನ್ನು ಕೂಡ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ ನಲ್ಲಿ ಸಿಟಿ ರವಿ ಇದರು ಎಂಬ ಪ್ರಶ್ನೆಗೆ, ಎಲ್ಲವೂ ಬದಲಾಗುತ್ತಿರುತ್ತದೆ, ಬದಲಾಗದೇ ಇರುವುದು ಕಾರ್ಯಕರ್ತ ಸ್ಥಾನ, ನಾನು ಸಾಮಾನ್ಯ ಕಾರ್ಯಕರ್ತ ಎಂದು ಪ್ರತಿಕ್ರಿಯೆ ನೀಡಿದರು.

ನಾನು ಕಳೆದ 35 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಬೂತ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ, ಮಾತನಾಡಲು ಬಹಳ ವಿಷಯವಿದೆ, ಈ ಮಾತನಾಡಿದರೇ ನನ್ನ ಮಾತೆ ನನಗೆ ತಿರುಗುಬಾಣವಾಗುತ್ತದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!