Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಡಿಸೆಂಬರ್‌ ವೇಳೆಗೆ ರೈತರಿಗೆ ಬರ ಪರಿಹಾರ ವಿತರಿಸಲಾಗುವುದು: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಬಂದಿದ್ದು, ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ (ಫ್ರೂಟ್ಸ್‌) ದತ್ತಾಂಶದ ಆಧಾರದಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಆಯ್ದ ಉಪ ವಿಭಾಗಾಧಿಕಾರಗಳು ಮತ್ತು ತಹಶೀಲ್ದಾರರ ಜೊತೆ ಸಭೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಆ ಎಲ್ಲಾ ಅಕ್ರಮಗಳನ್ನು ತಡೆದು ಫ್ರೂಟ್ಸ್‌ ದತ್ತಾಂಶದ ಆಧಾರದ ಮೇಲೆ ಪರಿಹಾರ ವಿತರಣೆ ಮಾಡಲು ಮುಂದಾಗಿದ್ದೇವೆ. ಎಲ್ಲವೂ ಅಂದುಕೊಂಡಂತೆ ಆದರೆ, ರೈತರಿಗೆ ಡಿಸೆಂಬರ್‌ ವೇಳೆಗ ಬರ ಪರಿಹಾರ ವಿತರಣೆಯಾಗಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಶೇಕಡ 95ರಷ್ಟು ರೈತರು ಫ್ರೂಟ್ಸ್‌ ಗುರುತಿನ ಸಂಖ್ಯೆ ಹೊಂದಿದ್ದಾರೆ. ಆದರೆ, ಒಟ್ಟು ಸಾಗುವಳಿ ವಿಸ್ತೀರ್ಣದ ಶೇ 63ರಷ್ಟು ಮಾತ್ರ ದತ್ತಾಂಶದಲ್ಲಿ ದಾಖಲಾಗಿದೆ. ಆದ್ದರಿಂದ ವಿಸ್ತೀರ್ಣದ ವಿವರವನ್ನು ದಾಖಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರದಲ್ಲಿ ಫ್ರೂಟ್ಸ್‌ ದತ್ತಾಂಶದಲ್ಲಿ ದಾಖಲಾದ ವಿಸ್ತೀರ್ಣದ ಆಧಾರದಲ್ಲೇ ಪರಿಹಾರ ವಿತರಣೆ ನಡೆಯಲಿದೆ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಕಂದಾಯ ಇಲಾಖೆ ಕಚೇರಿಗಳಲ್ಲಿ ಫ್ರೂಟ್ಸ್‌ ದತ್ತಾಂಶದಲ್ಲಿ ವಿಸ್ತೀರ್ಣ ದಾಖಲಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!