Mysore
25
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕಳ: ಪ್ರಾಂಶುಪಾಲರ ಬಂಧನ

ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್‌ನಲ್ಲಿ ನಡೆದಿದೆ.

ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 ಅಪ್ರಾಪ್ತ ಬಾಲಕೀಯರು ಆರು ವರ್ಷಗಳ ಅವಧಿಯಲ್ಲಿ ಶಾಲೆಯ ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಸಮಿತಿ ನಡೆಸಿದ ತನಿಖೆಯಲ್ಲಿ ವಿಷಯ ಬಹಿರಂಗವಾಗಿದೆ.

ಈ ಸಂಬಂಧ ಪ್ರಾಂಶುಪಾಲರು ತಮ್ಮ ಕಚೇರಿಗೆ ನಮ್ಮನ್ನು ಕರೆದು ಲೈಂಗಿಕ ಕೃತ್ಯ ಎಸಗಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ.

ಮಹಿಳಾ ಆಯೋಗ ನೀಡಿದ ದೂರಿನ ಮೇರೆಗೆ ನ.06 ರಂದು ಪ್ರಾಂಶುಪಾಲರನ್ನು ಪೋಲಿಸರು ಬಂಧಿಸಿದ್ದರು.

ಶಾಲೆಯ 390 ಹುಡುಗಿಯರಲ್ಲಿ 142 ಮಂದಿ ಹುಡುಗಿಯರು ಪ್ರಾಂಶುಪಾಲರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ದೂರಿನ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ. ಸದ್ಯ ಪ್ರಾಂಶುಪಾಲರು ಪೊಲೀಸರ ಬಂಧನದಲ್ಲಿದ್ದಾರೆ.

ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ತಿನಿಯರು : ಶಾಲೆಯಲ್ಲಿ ನಡೆಯುಯತ್ತಿದ್ದ ಲೈಂಗಿಕ ಕಿರುಕುಳ ಕುರಿತು ಸುಮಾರು ೧೫ ಮಂದಿ ಬಾಲಕೀಯರು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಆಗಸ್ಟ್ 31 ರಂದು ಪತ್ರ ಬರೆದಿದ್ದರು. ಹಾಗೂ ಪ್ರಧಾನಿ ನರೇಂದ್ರ ಮೋದಿ, ಸಿಜೆಐ ಡಿವೈ ಚಂದ್ರಚೂಡ್‌, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೇರಿದಂತೆ ಲೈಂಗಿಕ ಕಿರುಕುಳ ಕೃತ್ಯದ ಕುರಿತು ಪತ್ರ ಬರೆದಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!