Mysore
16
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಸುಪ್ರಿಂನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

ನವದೆಹಲಿ : ಭಾರತದ ಸರ್ವೋಚ್ಛ ನ್ಯಾಯಾಲದ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್‌ ಎಂ.ಫಾತಿಮಾ ಬೀವಿ ಅವರು ಇಂದು (ಗುರುವಾರ) ನಿಧನ ಹೊಂದಿದರು.

ಸದ್ಯ ಅವರಿಗೆ ೯೬ ವರ್ಷ ವಯಸ್ಸಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಮರಣ ಹೊಂದಿದ್ದಾರೆ.

ಮೂರು ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ನ್ಯಾಯಾಮೂರ್ತಿ ಫಾತಿಮಾ ಬೀವಿ ಅವರು ಭಾರತದ ಸರ್ವೋಚ್ಛ ನ್ಯಾಯಲಯದ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಕೂಡಾ ಅವರೇ ಆಗಿದ್ದಾರೆ.

ಫಾತಿಮಾ ಬೀವಿ ಅವರು ಏಪ್ರಿಲ್‌ ೩೦, ೧೯೨೭ ರಂದು ಪಥನಂತಟ್ಟದಲ್ಲಿ ಜನಿಸಿದರು. ೧೯೫೯ರಲ್ಲಿ ಬಾರ್‌ ಕೌನ್ಸಿಲ್‌ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದು, ಚಿನ್ನದ ಪದಕವನ್ನು ಪಡೆದರು.

ಕೇರಳದಲ್ಲಿ ವಕೀಲರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಅವರು, ೧೯೭೪ರಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದರು. ೧೯೮೦ರಲ್ಲಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಮಂಡಳಿ ಸೇರಿದರು. ೧೯೮೩ರಲ್ಲಿ ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು. ೧೯೮೯ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮೊದಲ ಮುಸ್ಲಿಂ ಹಾಗೂ ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಮೊದಲ ಮಹಿಳೆ ಇವರಾಗಿದ್ದಾರೆ.

೧೯೯೩ರಲ್ಲಿ ನಿವೃತ್ತರಾದ ನಂತರ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಾಗೂ ತಮಿಳುನಾಡಿದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ.

ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ನಾಲ್ಕು ಆರೋಪಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!