Mysore
25
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಪಾಂಡವಪುರ: ಸಾಲ ಬಾಧೆಯಿಂದ ರೈತ ನೇಣಿಗೆ ಶರಣು

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ.

ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಮೃತ ಕೆ.ಉಮೇಶ್ ಕ್ಯಾತನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದು, ಇವರು ತಂದೆಯಿಂದ ಬಳುವಳಿಯಾಗಿ ಬಂದಿದ್ದ ೧.೫ ಎಕರೆ ಜಮೀನಿನಲ್ಲಿ ಈ ಮೊದಲು ತರಕಾರಿ ಬೆಳೆದು ಕೈಸುಟ್ಟಿಕೊಂಡಿದ್ದರು. ನಂತರದಲ್ಲಿ ವಿವಿಧ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದು ತೆಂಗು, ಅಡಿಕೆ ಜತೆಗೆ ಇತರೆ ಮಿಶ್ರ ಬೆಳೆಗಳನ್ನು ಬೆಳೆದಿದ್ದರು ಎನ್ನಲಾಗಿದೆ.

ಆದರೆ `ಬರ’ ಹಿನ್ನೆಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಪಡೆದಿದ್ದ ಸಾಲ ಮರುಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದರು. ಕ್ಯಾತನಹಳ್ಳಿಯ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ಚಿನ್ನಾಭರಣಗಳ ಮೇಲಿನ ಸಾಲ ೬ ಲಕ್ಷ ಸಾಲ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮರ‍್ನಾಲ್ಕು ಲಕ್ಷ ಸಾಲದ ಜತೆಗೆ ಖಾಸಗಿ ಲೇವಾದೇವಿದಾರರಿಂದಲೂ ಲಕ್ಷಾಂತರ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.

ಬ್ಯಾಂಕ್ ಸೇರಿದಂತೆ ಇತರೆಡೆಗಳಿಂದ ಸಾಲ ಮರುಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗುರುವಾರ ಬೆಳಿಗ್ಗೆ ೭.೩೦ರ ಸಮದಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

ಈ ಸಂಬಂಧ ಮೃತರ ಸಹೋದರ ಗೋಪಾಲ್ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!