Mysore
19
overcast clouds

Social Media

ಶನಿವಾರ, 14 ಮಾರ್ಚ್ 2026
Light
Dark

ಪನೌತಿ ಬಗ್ಗೆ ನಟ ಕಿಶೋರ್‌ ಪ್ರತಿಕ್ರಿಯೆ ಇದು!

ಬೆಂಗಳೂರು : ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್​ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಪನೌತಿ ಎಂದು ಕರೆದಿದ್ದರು.  ಅದಾದ ನಂತರ ಪನೌತಿ ಬಗ್ಗೆ ಕನ್ನಡದ ನಟ ಕಿಶೋರ್‌ ಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಪನೌತಿಯಿಂದ ಸೋಲುವುದು ಎಷ್ಟು ಸುಳ್ಳೋ..ಜೈಶ್ರೀರಾಮನಿಂದ ಗೆಲ್ಲುವುದೂ ಅಷ್ಟೇ ಸುಳ್ಳು ಎಂದು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇಂದಿನ ವ್ಯವಸ್ಥೆಯ ವ್ಯಂಗ್ಯವೇನೆಂದರೆ ಸಜ್ಜನರ ಆಟ ಎಂದು ಕರೆಯಲ್ಪಡುವ ಕ್ರಿಕೆಟ್ಟಿನಲ್ಲೂ, ಪ್ರೇಕ್ಷಕರನ್ನು ಜೈ ಶ್ರೀರಾಮ್ ಎಂದು ಧಾರ್ಮಿಕ ಘೋಷಣೆಗಳನ್ನು ಕೂಗುವ ಮಟ್ಟಕ್ಕೆ ತಂದಿಟ್ಟವರು ಪನೌತಿಯ ಪ್ರಭಾವವನ್ನೂ ಹೆಗಲಿಗೇರಿಸಿಕೊಳ್ಳಲೇಬೇಕು ಎಂದು ಕಿಡಿಕಾರಿದ್ದಾರೆ.

ದೇಶವನ್ನು ವಿನಾಶದಂಚಿಗೆ ತಳ್ಳುತ್ತಿರುವ ಧರ್ಮಾಂಧತೆ, ಮೂಢನಂಬಿಕೆ, ಬಡತನ, ಅಸಮಾನತೆ, ನಿರುದ್ಯೊಗ ಮತ್ತು ಭ್ರಷ್ಟಾಚಾರಗಳು ನಿಜವಾದ ಪನೌತಿಯಾಗಿದೆ. “ಹೊಲಸು ಧರ್ಮಾಂಧ ರಾಜಕಾರಣದಿಂದ ಮೂಢನಂಬಿಕೆಯ ಕೂಪದಲ್ಲಿ ತಳ್ಳಲ್ಪಟ್ಟು ಮೂರ್ಖರಾದ ನಾವು ತಿಳಿದುಕೊಳ್ಳಬೇಕಿರುವುದು ಇದನ್ನೇ ಎಂದು ಅವರು ಹೇಳಿದ್ದಾರೆ.

May be an image of text that says "Pa नौती M से कहते नानिए क्या हो"

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!