ಮುಂದಿನ ಮಾರ್ಚ್ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಲುವಾಗಿ ಡಿಸೆಂಬರ್ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್ ಆಗಿತ್ತು.
ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಉಳಿಸಿಕೊಂಡ ಆಟಗಾರರು: ಅಬ್ದುಲ್ ಸಮದ್, ಏಡನ್ ಮಾರ್ಕ್ರಮ್ ( ನಾಯಕ ), ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಹೆನ್ರಿಚ್ ಕ್ಲಾಸೀನ್, ಮಯಾಂಕ್ ಅಗರ್ವಾಲ್, ಅನ್ಮೋಲ್‌ಪ್ರೀತ್ ಸಿಂಗ್, ಉಪೇಂದ್ರ ಸಿಂಗ್ ಯಾದವ್, ನಿತಿಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಮಾರ್ಕೊ ಯಾನ್‌ಸೆನ್, ವಾಷಿಂಗ್‌ಟನ್ ಸುಂದರ್, ಸನ್ವಿರ್ ಸಿಂಗ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಫಜಲ್‌ಹಕ್ ಫರೂಕಿ ಹಾಗೂ ಶಹಬಾಜ್ ಅಹ್ಮದ್. ( ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಯಾಂಕ್ ದಾಗರ್ ಅವರನ್ನು ನೀಡಿ ಶಹಬಾಜ್ ಅಹ್ಮದ್ ಅವರನ್ನು ವಿನಿಮಯ ಮಾಡಿಕೊಳ್ಳಲಾಗಿದೆ )
ಬಿಡುಗಡೆಗೊಂಡ ಆಟಗಾರರು: ಹ್ಯಾರಿ ಬ್ರೂಕ್, ಸಮರ್ಥ್ ವ್ಯಾಸ್, ಕಾರ್ತಿಕ್ ತ್ಯಾಗಿ, ವಿವ್ರಂತ್ ಶರ್ಮಾ, ಅಕಿಲ್ ಹೊಸೈನ್ ಹಾಗೂ ಆದಿಲ್ ರಶೀದ್.