Mysore
16
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ

ತೆಲಂಗಾಣ: ಭಾರತದ ಪ್ರಧಾನಿ ನರೇಂದ್ರ ಮೋದಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ತಿಮ್ಮಪ್ಪನ ದರ್ಶನ ಪಡೆದರು.

ಭಾನುವಾರ ರಾತ್ರಿ ತಿರುಮಲದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ  ತಿರುಮಲದಲ್ಲೇ ತಂಗಿದ್ದರು. ಇಂದು ಮುಂಜಾನೆ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಭಾರತದ ಸಮಸ್ತ ಜನತೆಗೆ ಆರೋಗ್ಯ, ಯೋಗಕ್ಷೇಮ ನೀಡುವಂತೆ ದೇವರಲ್ಲಿ ಪ್ರಾರ್ಥನೆ ನೀಡಲು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೋದಿ ಪೋಟೊ, ಮಾಹಿತಿ ಹಂಚಿಕೊಂಡಿದ್ದಾರೆ.

ಭಾನುವಾರ ರಾತ್ರಿ ತಿರುಮಲ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಗಳೊಂದಿಗೆ ರಾಜ್ಯಪಾಲರಾದ ಎಸ್‌ ಅಬ್ದುಲ್‌ ನಜೀರ್‌, ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ್‌ ರೆಡ್ಡಿ ತಿರುಮಲಕ್ಕೆ ತೆರಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!