Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

ಡಿಕೆಶಿ ಪ್ರಕರಣ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್‌: ಸಿಎಂ ಏನಂದ್ರು

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ನೀಡಿದ್ದ ತನಿಖೆಯನ್ನು, ಈಗಿನ ಕಾಂಗ್ರೆಸ್‌ ಸರ್ಕಾರ ಹಿಂಪಡೆದಿತ್ತು, ಇದನ್ನು ಪ್ರಶ್ನಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ನಡೆ ಬಗ್ಗೆ ಮಾತನಾಡಿರುವ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮ ತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಸಿಎಂ ಅವರು, ‘ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಉಚ್ಚನ್ಯಾಯಾಲಯದಲ್ಲಿ ದಾವೆ ಹೂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಸರ್ಕಾರ ಡಿಕೆ ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು ಆದೇಶವನ್ನು ವಾಪಸ್ ಪಡೆದಿದ್ದೇವೆ ಎಂದರು

ಅಧ್ಯಕ್ಷರ ನೇಮಕಾತಿಯಲ್ಲಿ ಯಾರ ಅಭಿಪ್ರಾಯವನ್ನು ಪಡೆಯಲಾಗಿಲ್ಲ. ಆಯ್ಕೆ ಪ್ರಕ್ರಿಯೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಆಯ್ಕೆ ಪಟ್ಟಿ ಇನ್ನೂ ಅಂತಿಮವಾಗಿಲ್ಲದಿರುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!