ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಇಂದು ( ಡಿಸೆಂಬರ್ 2 ) ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ.
ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಲ್ಲದೇ ಬೆಳಗ್ಗೆಯಿಂದ ಮಹದೇವಯ್ಯ ಅವರ ಮೊಬೈಲ್ ಸಹ ಸ್ವಿಚ್ ಆಫ್ ಆಗಿದ್ದು ಸದ್ಯ ಮಹದೇವಯ್ಯ ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿದೆ.