Mysore
29
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಗೌರಿ ಹತ್ಯೆ ಪ್ರಕರಣ: 11ನೇ ಆರೋಪಿಗೆ ಜಾಮೀನು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನ ದಲ್ಲಿರುವ ಮೋಹನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಮೋಹನ್ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪ್ರಕರಣವೇನು: 2017ರ ಸೆ.5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಗೌರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ., ಪರಶುರಾಮ್ ವಾಗೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ.

ಎಸ್‌ಐಟಿ 17 ಆರೋಪಿ ಗಳನ್ನು ಬಂಧಿಸಿ, 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಮೋಹನ್ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ಆರೋಪ ಆತನ ಮೇಲಿದೆ.ಇದೀಗ ಆತನಿಗೆ ಜಾಮೀನು ನೀಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ