Mysore
22
few clouds

Social Media

ಬುಧವಾರ, 07 ಜನವರಿ 2026
Light
Dark

ಕಾರೇಕುರದಲ್ಲಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ.

ಬಣ್ಣದ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ವೇಳೆ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಯೋಗೇಶ್ ಜತೆ ಹಳೇ ವೈಷಮ್ಯ ಹೊಂದಿದ್ದವರು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಯೋಗೇಶ್ ಪರಿಚಿತರೆ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಶ್ರೀರಂಗಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಪಂಚನಾಮೆ ನಂತರ ವಾರಸುದಾರರಿಗೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!