Mysore
27
overcast clouds

Social Media

ಸೋಮವಾರ, 22 ಜೂನ್ 2026
Light
Dark

ಲೋಕಸಭೆ ಚುನಾವಣೆ: ರಾಜ್ಯದಲ್ಲಿ ಬಿಜೆಪಿ 28 ಸ್ಥಾನ ಗೆದ್ದರೆ ಅದರ ಕ್ರೆಡಿಟ್ ಮಾತ್ರ ಮೋದಿಗೆ: ಯತ್ನಾಳ್

ಹಾಸನ : ೨೦೨೪ ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎಲ್ಲಾ ೨೮ ಸ್ಥಾನಗಳನ್ನು ಗೆದ್ದರೇ ಅದರ ಕ್ರೆಡಿಟ್‌ ನೇರವಾಗಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ವಿನಃ ಬೇರಾವ ನಾಯಕರಿಗೆ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗುಡುಗಿದ್ದಾರೆ.

ಹಿಂದೂ ಧರ್ಮದ ಮತ್ತು ದೇಶದ ಉದ್ದಾರದ ದೃಷ್ಠಯಿಂದ ನರೇಂದ್ರ ಮೋದಿ ಅವರು ೩ನೇ ಬಾರಿಗೆ ಪ್ರಧಾನಿಯಾಗಬೇಕು ಎಂಬ ಕಾರಣದಿಂದಾಗಿ ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದರು.

ಬಿಜೆಪಿ ಗೆಲುವಿಗೆ ಜೋಡೆತ್ತು ಕೆಲಸ ಮಾಡುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಹೇಳಿಕೆಯನ್ನು ಲೇವಡಿ ಮಾಡಿದ ಯೆತ್ನಾಳ್, ಜೋಡೆತ್ತುಗಳಲ್ಲಿ ಒಬ್ಬರು ದೆಹಲಿಯಲ್ಲಿ ಮತ್ತು ಇನ್ನೊಬ್ಬರು ಬೆಂಗಳೂರಿನಲ್ಲಿದ್ದಾರೆ ಎಂದರು.

ಇದೇ ವೇಳೆ ಮಾಜಿ ಸಚಿವ ವಿ.ಸೋಮಣ್ಣ ರಾಜೀನಾಮೆ ನೀಡುವುದಿಲ್ಲ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣ ಎಲ್ಲರಿಗೂ ತಿಳಿದಿದೆ. ದುರದೃಷ್ಟವಶಾತ್ ಬಿಜೆಪಿಯಲ್ಲಿರುವ ಕೆಲವು ನಾಯಕರು ಅವರನ್ನು ರಾಜ್ಯದಲ್ಲಿ ಮಹಾನ್ ನಾಯಕರೆಂದು ಬಿಂಬಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!