Mysore
18
clear sky

Social Media

ಗುರುವಾರ, 29 ಜನವರಿ 2026
Light
Dark

ಶಿವಣ್ಣನಿಗೆ ರಾಜಕೀಯಕ್ಕೆ ಬರುವಂತೆ ಆಹ್ವಾನ ಕೊಟ್ಟ ಡಿಕೆಶಿ

ಬೆಂಗಳೂರು : ಸೆಂಚುರಿ ಸ್ಟಾರ್‌ ಶಿವರಾಜ್‌ ಕುಮಾರ್‌ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಹ್ವಾನ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್‌ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದಾರೆ.

ಆರ್ಯ ಈಡಿಗ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್‌ ಅವರು, ಮಿತ್ರ ಶಿವರಾಜ್‌ ಕುಮಾರ್‌ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗುವಂತೆ ಸಲಹೆ ನೀಡಿದ್ದೇನೆ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಅವರಿಗೆ ಟಿಕೆಟ್‌ ನೀಡುತ್ತೇನೆ. ಆದರೆ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ಅವುಗಳ ಚಿತ್ರೀಕರಣ ಮುಗಿಯಬೇಕು ಎನ್ನುತ್ತಿದ್ದಾರೆ. ಸಿನಿಮಾ ಚಿತ್ರೀಕರಣವನ್ನು ಯಾವಾಗ ಬೇಕಾದರೂ ಮುಗಿಸಬಹುದು ಆದರೆ ಲೋಕಸಭೆ ಚುನಾವಣೆ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದರು.

ಇನ್ನು ಆರ್ಯ ಈಡಿಗ ಸಮುದಾಯವನ್ನು ಕುರಿತು ಮಾತನಾಡಿದ ಡಿಕೆಶಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಆರ್ಯ ಈಡಿಗ ಸಮುದಾಯದ ಕೊಡುಗೆ ಬಹಳಾ ಇದೆ. ನಾವು ನಿಮ್ಮ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ. ನಿಮ್ಮ ಎಲ್ಲಾ ಬೇಡಿಕೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ. ಆರ್ಯ ಈಡಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಸೇರಿಸದಂತೆ ಎಲ್ಲಾ ಮನವಿಗಳೂ ಕೂಡ ನಮ್ಮ ಗಮನದಲ್ಲಿವೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಅನುದಾನ ಘೋಷಣೆ ಮಾಡುವಂತಿಲ್ಲ. ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!