Mysore
21
mist

Social Media

ಸೋಮವಾರ, 23 ಡಿಸೆಂಬರ್ 2024
Light
Dark

U19 Asia Cup-2023: ಭಾರತದ ವಿರುದ್ಧ ಪಾಕ್‌ಗೆ ಭರ್ಜರಿ ಜಯ

ದುಬೈ : ಪಾಕ್‌ ಬ್ಯಾಟರ್‌ ಅಝಾನ್ ಅವೈಸ್ ಅವರ ಅಮೋಘ ಶತಕದ ಬಲದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ ಜಯಭೇರಿ ಬಾರಿಸಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂಡರ್‌ 19 ಏಷ್ಯಾಕಪ್‌ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಭಾರತ ತಂಡದ ವಿರುದ್ಧ 8 ವಿಕೆಟ್‌ಗಳ ಜಯ ದಾಖಲಿಸಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಆದರ್ಶ್ ಸಿಂಗ್ (62) ಹಾಗೂ ಅರ್ಶಿನ್ ಕುಲ್ಕರ್ಣಿ (24) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ರುದ್ರ ಪಟೇಲ್ ಕೇವಲ 1 ರನ್​ಗಳಿಸಿ ಔಟಾದರು. ನಾಯಕ ಉದಯ್ ಸಹರಾನ್ 98 ಎಸೆತಗಳಲ್ಲಿ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ಕೆಳ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಚಿನ್ ದಾಸ್ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 58 ರನ್ ಕಲೆಹಾಕಿದರು. ಈ ಮೂಲಕ ಭಾರತ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 259 ರನ್‌ಗಳ ಸಾಧಾರಣ ಗುರಿ ನೀಡಿತು.

260 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಆರಂಭಿಕ ಆಘಾತವಾಯಿತು. ಶಾಮಿಲ್ ಹುಸೇನ್ ಕೇವಲ 8 ರನ್​ಗೆ ಔಟಾದರು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಶಹಝೈಬ್ ಖಾನ್ ಹಾಗೂ ಅಝಾನ್ ಅವೈಸ್ 110 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಶಹಝೈಬ್ 63 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ಅಝಾನ್ ಅವೈಸ್ 130 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. ಅಲ್ಲದೆ ನಾಯಕ ಸಾದ್ ಬೇಗ್ (68) ಜೊತೆಗೂಡಿ 47 ಓವರ್​ಗಳಲ್ಲಿ ತಂಡವನ್ನು ಗುರಿಮುಟ್ಟಿಸಿದರು.

ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗ್ರೂಪ್‌ ಎ ನಲ್ಲಿ ಅಗ್ರಸ್ಥಾನಕ್ಕೇರಿತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ