Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ವಕೀಲರ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು ಶಿಕ್ಷೆ: ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಳಗಾವಿ : ಕಲಬುರಗಿಯಲ್ಲಿ ವಕೀಲರ ಕೊಲೆ ಮತ್ತು ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಹಲ್ಲೆ ಬೆನ್ನಲ್ಲೇ ವಕೀಲ ಸಮುದಾಯದ ಬಹುನಿರೀಕ್ಷಿತ ವಕೀಲರ ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.

2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್ ವಿಧಾನ ಸಭೆಯಲ್ಲಿ ಮಂಡಿಸಿದ್ದಾರೆ.

ವಕೀಲರ ಮೇಲೆ ಹಲ್ಲೆ ತಡೆಯುವ ನಿಟ್ಟಿನಲ್ಲಿ ಈ ವಿಧೇಯಕವನ್ನು‌ ತರಲಾಗಿದ್ದು, ಈ ವಿಧೇಯಕ ಅಂಗೀಕಾರಗೊಂಡಲ್ಲಿ, ವಕೀಲರಿಗೆ ಕಾನೂನು ರಕ್ಷಣೆ ಸಿಗಲಿದೆ. ವಕೀಲರ ಮೇಲೆ ಹಲ್ಲೆ ಮಾಡಿದವರಿಗೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ‌‌ ವಿಧಿಸುವ ಕಾನೂನು ಜಾರಿಯಾಗಲಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 10ನೇ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ಸಂರಕ್ಷಣಾ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.

ಪ್ರಮುಖ ಅಂಶಗಳೇನು?
ವಕೀಲರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೆ 6 ತಿಂಗಳಿಂದ 3 ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.
ಪೊಲೀಸರು ಯಾವೊಬ್ಬ ವಕೀಲರನ್ನು ಬಂಸಿದರೆ 24 ಗಂಟೆಯೊಳಗಾಗಿ ವಕೀಲರ ಸಂಘಕ್ಕೆ ಮಾಹಿತಿ ನೀಡಬೇಕು.
ಬೆದರಿಕೆ, ಕೆಲಸಕ್ಕೆ ಅಡ್ಡಿ, ಕಿರುಕುಳ ನೀಡಿದರೆ ಶಿಕ್ಷೆ ಆಗಲಿದೆ.
ದೇಶ- ವಿದೇಶದಲ್ಲಿ ಮುಕ್ತವಾಗಿ ಪ್ರಯಾಣಿಸಲು ಹಾಗೂ ಕಕ್ಷಿದಾರರೊಂದಿಗೆ ಸಮಾಲೋಚಿಸಲು ವಿಧೇಯಕದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.

ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದ ವಕೀಲರ ಸಂಘ, ಈ ಹಿಂದಿನ ಬಿಜೆಪಿ ಸರ್ಕಾರಕ್ಕೆ ಕಾಯ್ದೆ ಅನುಮೋದನೆಗೆ ಮನವಿ ಮಾಡಿತ್ತು.

ಚಿಕ್ಕಮಗಳೂರಲ್ಲಿ ಹಲ್ಲೆ, ಕಲಬುರಗಿಯಲ್ಲಿ ಕೊಲೆ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇತ್ತ ಮಂಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆಯಾಗಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದರು.

ಈ ಎರಡೂ ಘಟನೆಗಳನ್ನು ಖಂಡಿಸಿ ಮೈಸೂರು, ಕೂಡ್ಲಿಗಿ, ಕಲಬುರಗಿ ಮುಂತಾಡೆದೆ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದವು ಈ ಸಂದರ್ಭದಲ್ಲಿ ವಕೀಲ ರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ವಕೀಲರ ಮನವಿ ಮಾಡಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ