Mysore
28
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ರಾಜಭವನಕ್ಕೆ ಬಾಂಬ್‌ ಬೆದರಿಕೆ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಾಂಬ್‌ ಬೆದರಿಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗಷ್ಟೆ ನಗರದ ಹಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಇದೀಗ ರಾಜಭವನಕ್ಕೆ ಬಾಂಬ್‌ ಬೆದರಿಕೆ ಒಡ್ಡಲಾಗಿದೆ.
ರಾತ್ರಿ 11 ; 30 ರ ಸುಮಾರಿಗೆ ಯಾರೋ ದುಷ್ಕರ್ಮಿಗಳು ಎನ್‌ಐಎ ಅಧಿಕಾರಿಗಳಿಗೆ ಕರೆ ಮಾಡಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ವಿಭಾಗದ ಪೊಲೀಸರು ಪರಿಶೀಲನೆ ನಡೆಸಿದ ಪೊಲೀಸರು ರಾಜಭವನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಯಾರು ಕರೆ ಮಾಡಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ನಗರದ 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿತ್ತು. 
ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿದೆ. ವಿಚಾರ ತಿಳಿದು  ಪೋಷಕರು ಆತಂಕಗೊಂಡಿದ್ದರು. 
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.
ಇದೀಗ ರಾಜಭವನಕ್ಕೂ ಇದೇ ರೀತಿಯ ಬೆದರಿಕೆ ಬಂದಿದೆ.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ