ತುಮಕೂರು : ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಸುಸಂಸ್ಕೃತ ರಾಜಕಾರಣಿ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ. ಸೋಮಣ್ಣ ಯತ್ನಾಳ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ತುಮಾಕೂರಿನಲ್ಲಿ ಮಾತನಾಡಿರುವ ಅವರು ಯತ್ನಾಳ್ ಅವರು ಒಬ್ಬ ಸುಸಂಸ್ಕೃತ ರಾಜಕಾರಣಿ. ನನ್ನ ನೋವು ನನಗೆಗೊತ್ತು ಅವರ ನೋವು ಅವರಿಗೆ ಗೊತ್ತು ಅದಕ್ಕೆ ಅವರು ಮಾತನಾಡಿರಬಹುದು ಎಂದು ಯತ್ನಾಳ್ ಪರ ಸೋಮಣ್ಣ ಬ್ಯಾಟಿಂಗ್ ಮಾಡಿದ್ದಾರೆ.
ಇನ್ನು ಯಡಿಯೂರಪ್ಪ ಅವರ ಕುರಿತು ಯತ್ನಾಳ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋಮಣ್ಣ, ಹಿರಿತನ ಅನ್ನೋದು ನಡತೆಯಲ್ಲಿರಬೇಕು. ನಾನು 40 ವರ್ಷಗಳ ಕಾಲ ರಾಜಕಾರಣ ಮಾಡಿದ್ದೀನಿ. ಯಾರು ಕೂಡ ನನ್ನ ಕಡೆ ಬೊಟ್ಟು ಮಾಡಿ ತೋರಿಸುವ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.