Mysore
27
haze

Social Media

ಗುರುವಾರ, 01 ಜನವರಿ 2026
Light
Dark

ಸಂಸತ್‌ ಭದ್ರತಾ ಲೋಪ; ಪ್ರತಾಪ್‌ ಸಿಂಹ ಕಚೇರಿ ಮುಂದೆ ಪ್ರತಿಭಟನೆ

ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇಬ್ಬರು ಯುವಕರಲ್ಲಿ ಇಬ್ಬರು ಕರ್ನಾಟಕದವರಾಗಿದ್ದು, ಈ ಪೈಕಿ ಮನೋರಂಜನ್ ಎಂಬಾತ ಮೈಸೂರು ಮೂಲದ ಇಂಜಿನಿಯರ್ ಪದವೀಧರನಾಗಿದ್ದು, ಇನ್ನೊಬ್ಬ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಲ್ಲಿ ವಿಸಿಟರ್ಸ್‌ ಪಾಸ್‌ ಪಡೆದು ಸಂಸತ್‌ ಪ್ರವೇಶಿಸಿದ್ದರು.

ಹೀಗಾಗಿ ಇದೀಗ ಪ್ರತಾಪ್‌ ಸಿಂಹ ವಿರುದ್ಧ ಸಾರ್ವಜನಿಕರು ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರು ಕಿಡಿಕಾರುತ್ತಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಸಮಿತಿಯ ಕಾರ್ಯಕರ್ತರು ನಗರದ ಜಲದರ್ಶಿನಿ ಅತಿಥಿ ಗೃಹದ ಪ್ರತಾಪ್‌ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪ್ರತಾಪ್‌ ಸಿಂಹ ಅವರೇ ಈ ಘಟನೆಗೆ ನೇರ ಹೊಣೆ ಎಂದು ಕಿಡಿಕಾರಿ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!