Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾ: ಪರಮೇಶ್ವರ್‌

ಬೆಳಗಾವಿ : ನಾಗರಿಕರ ಹಿತದೃಷ್ಠಿ ಮತ್ತು ಸುರಕ್ಷತೆಗಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಬೆಂಗಳೂರಿನಲ್ಲಿ ನಾಗರಿಕರ ಸುರಕ್ಷತೆಗಾಗಿ ಈಗಾಗಲೇ ೭೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದರ ಕಾರ್ಯಾಚರಣೆಗಾಗಿ ಕಮಾಂಡರ್‌ ಸೆಂಟರ್‌ನಲ್ಲಿ ವೀಕ್ಷಣೆ ಮಾಡಲು ಸಿಬ್ಬಂದಿಗಳನ್ನು ಅಳವಡಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ೨೫೦೦ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರಿಸಿದರು.

ಉನ್ನತ ಗುಣಮಟ್ಟದ ಸಿಸಿ ಕ್ಯಾಮರಾಗಳು ಇದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ವಾಣಿಜ್ಯ ಕಟ್ಟಡ, ಪ್ರದೇಶಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಟ್ಟಡ, ಬಸ್‌ ನಿಲ್ದಾಣಗಳು ಸೇರಿದಂತೆ ಹಲವು ಕಡೆಗಳಲ್ಲಿ ಅಳವಡಿಸಿ ವಿಶೇಷ ನಿಗಾ ಇರಿಸಲಾಗಿದೆ ಎಂದು ಪರಮೇಶ್ವರ್‌ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!