Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮೈಸೂರು: ವಿದ್ಯುತ್ ಸ್ಪರ್ಶಿಸಿ ಆನೆ ಸಾವು

ಮೈಸೂರು : ವಿದ್ಯುತ್‌ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರು ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ಹುಣಸೂರು ವ್ಯಾಪ್ತಿಯ ಗ್ರಾಮದ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ ತಗುಲಿ ಆನೆ ಮೃತಪಟ್ಟಿದೆ. ವಿಚಾರ ತಿಳಿದ ಕೂಡಲೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು, ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಆನೆ ಸಾವಿಗೆ ವಿದ್ಯುತ್ ಸ್ಪರ್ಶವೇ ಕಾರಣ ಎಂದು ಕಂಡುಬಂದರೆ ಕೃಷಿ ಭೂಮಿ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷಕುಮಾರ ಚಿಕ್ಕನರಗುಂದ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ