ರಾಮನಗರ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನಲ್ಲಿ ಮುರುಗನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಕಳೆದ ಹಲವು ವರ್ಷಗಳಿಂದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ.
ಮಹದೇವಯ್ಯ ಬಳಿ ಹಣ ಇರೋದನ್ನ ಗಮನಿಸಿದ್ದ ಮುರುಗನ್ ತನ್ನ ತಂಡದ ಜೊತೆ ಸೇರಿ ಹತ್ಯೆ ಮಾಡಿದ್ದಾನೆ. ಹಣದ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೋಲಿಸರು ಹುಡುಕಾಟ ಮುಂದುವರಿಸಿದ್ದಾರೆ.