Mysore
21
mist

Social Media

ಸೋಮವಾರ, 23 ಡಿಸೆಂಬರ್ 2024
Light
Dark

ರಾಜ್ಯಸಭೆ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಎಎಪಿ ಮುಖ್ಯಸ್ಥರು ಪತ್ರ ಬರೆದಿದ್ದು, ಆರೋಗ್ಯ ಸಮಸ್ಯೆ ಹೊಂದಿರುವ ಸಂಜಯ್ ಸಿಂಗ್ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಚಡ್ಡಾ ಅವರನ್ನು ನಾಯಕನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.

ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಬಲವನ್ನು ಹೊಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ