Mysore
17
few clouds

Social Media

ಗುರುವಾರ, 29 ಜನವರಿ 2026
Light
Dark

ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಚತೆ: ಪ್ರಾಂಶುಪಾಲ ಸಹಿತ ಮೂವರ ಅಮಾನತು

ಕೋಲಾರ : ಶಾಲಾ ವಿದ್ಯಾರ್ಥಿಗಳನ್ನು ಬಳಸಿಕೊಂಡು ಶೌಚ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಜಾಗೃತ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶಾಲಾ ಆವರಣ ಹಾಗೂ ಇಂಗು ಗುಂಡಿಗಳ ಸ್ವಚ್ಛತೆ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲುಹಳ್ಳಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಿ.ಭಾರತಮ್ಮ, ಪ್ರಭಾರ ನಿಲಯಪಾಲಕ ಮಂಜುನಾಥ್ ಹಾಗೂ ಹಾಗೂ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಎಂಬವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!