ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ಇನ್ನು ಇಂದು ಮಂಡ್ಯದಲ್ಲಿ ಹಾಗೂ ರಾಮನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್ 19 ) ಒಟ್ಟು 44 ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 44 ಹೊಸ ಪ್ರಕರಣಗಳು ವರದಿಯಾಗಿದ್ದರೆ, 35 ಜನ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 79 ಇದ್ದು, ಕೊನೆಯ 24 ಗಂಟೆಗಳಲ್ಲಿ 722 ಟೆಸ್ಟ್‌ಗಳು ನಡೆದಿವೆ, 487 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 235 ರ್ಯಾಟ್ ಟೆಸ್ಟ್‌ಗಳು ನಡೆದಿವೆ.
ಒಟ್ಟು 79 ಸಕ್ರಿಯ ಪ್ರಕರಣಗಳ ಪೈಕಿ 62 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 17 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.





