Mysore
25
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ಮೈಸೂರು: ರಾಜ್ಯದೆಲ್ಲೆಡೆ ಕೋವಿಡ್‌ ರೂಪಾಂತರಿ ಜೆ.ಎನ್‌-1 ಹಂತ ಹಂತವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೊವಿಡ್‌ನಿಂದಾಗಿ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚಿರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಕೆಲವು ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನೆಚ್ಚಿಕೆ ವಹಿಸುವಂತೆ ಸರ್ಕಾರ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿತ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇನ್ನು ಬರಲಿರುವ ಕ್ರಿಸ್‌ಮಸ್‌ ಹಾಗೂ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ವರ್ಷಾಚರಣೆಗೆ ಯಾವುದೇ ಪ್ರತ್ಯೇಕ ಮಾರ್ಗ ಸೂಚಿ ವಿಧಿಸಿಲ್ಲ. ಆದರೆ ಸಾರ್ವಜನಿಕರು ಮುನ್ನೆಚ್ಚಿಕೆ ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

60ವರ್ಷ ಮೇಲ್ಪಟ್ಟ, ಕಾಯಿಲೆಯಿಂದ ಬಳಲುತ್ತಿರುವ, ರೋಗಿಗಳು ಖಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗುಂಪಿನಲ್ಲಿ ಸೇರಬಾರದು. ಅಂತರ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!