Mysore
29
scattered clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಸಂಸತ್‌ ಭದ್ರತಾ ಲೋಪ: ಮೈಸೂರಿನ ಮತ್ತೊಬ್ಬನ ವಿಚಾರಣೆ

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇದೀಗ ಮೈಸೂರು ಮೂಲದ ಸೂರಪ್ಪ ಎಂಬುವವನ ವಿಚಾರಣೆ ನಡೆಸಿದ್ದಾರೆ.

ಮೈಸೂರಿನ ವಿಜಯನಗರದ ಸಲೂನ್ ಒಂದರಲ್ಲಿ ಕೆಲಸ ಮಾಡುತ್ತಿರುವ ಸೂರಪ್ಪ ಎಂಬಾತನ ಜತೆ ಮನೋರಂಜನ್‌ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ಸಹ ನಡೆದಿತ್ತು ಎಂಬ ಮಾಹಿತಿ ಇದೆ. ವಿಚಾರಣೆ ವೇಳೆ ಮನೋರಂಜನ್‌ ಬಾಯಿಬಿಟ್ಟ ವ್ಯಕ್ತಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!