Mysore
23
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಇಂದಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ 2 ದಿನಗಳ ಮೈಸೂರು ಜಿಲ್ಲಾ ಪ್ರವಾಸ ; ವಿವಿಧ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಮೈಸೂರಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಬೆಳಗ್ಗೆ 10.55ಕ್ಕೆ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಚಾಮುಂಡಿಬೆಟ್ಟದ ತಪ್ಪಲಿನ ಕೆಎನ್‌ಎಸ್‌ ಬಡವಾಣೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಹಾಗೂ ತರಬೇತಿ ಕೇಂದ್ರದ ಶಂಕುಸ್ಥಾಪನೆ ಮಾಡಲಿದ್ದಾರೆ.

ಬಳಿಕ ಮೈಸೂರು ಕಿದ್ವಾಯಿ ಸ್ಮಾರಕ ಗಂಥಿಸಂಸ್ಥೆಯ ಪೆರಿಫೆರಲ್‌ ಕ್ಯಾನ್ಸರ್‌ ಕೇಂದ್ರದ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಸಂಜೆ ನಂಜನಗೂಡಿನ ಕವಲಂದೆಯ ನೂತನ ಪೊಲೀಸ್‌ ಠಾಣೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.30ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟನೆ ನೆರವೇರಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!