Mysore
22
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ದಕ್ಷಿಣ ಆಫ್ರಿಕಾ ಪ್ರವಾಸದಿಂದ ತವರಿಗೆ ಮರಳಿದ ವಿರಾಟ್ ಕೊಹ್ಲಿ: ವರದಿ

ಮುಂಬೈ: ಡಿಸೆಂಬರ್‌ ೨೬ ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭಗೊಳ್ಳಲಿದ್ದು, ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ, ಟೀಂ ಇಂಡಿಯಾ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕೌಟುಂಬಿಕ ತುರ್ತು ಕಾರಣಗಳಿಗಾಗಿ ಭಾರತದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾದಿಂದ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಟೀಂ ಇಂಡಿಯಾ ಆಡಳಿತ ಮಂಡಳಿಯ ಅನುಮತಿ ಪಡೆದು ಮೂರು ದಿನಗಳ ಹಿಂದೆ ಮುಂಬೈಗೆ ಮರಳಿದ್ದರು. ಪ್ರಿಟೋರಿಯಾದಲ್ಲಿ ಗುರುವಾರ ನಡೆದ ಮೂರನೆ ಹಾಗೂ ಅಂತಿಮ ಪಂದ್ಯದ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿಲ್ಲ. ಯಾವ ಕೌಟುಂಬಿಕ ತುರ್ತು ಕಾರಣಕ್ಕಾಗಿ ವಿರಾಟ್ ಮರಳಿದ್ದಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಿದ್ದರೂ, ಅವರು ಡಿಸೆಂಬರ್ 22ರಂದು ಮತ್ತೆ ದಕ್ಷಿಣ ಆಫ್ರಿಕಾಗೆ ಮರಳಲಿದ್ದಾರೆ ಎಂದು Crickbuzz ವರದಿ ಮಾಡಿದೆ.

ನಾಯಕ ರೋಹಿತ್‌ ಶರ್ಮಾ ಮತ್ತು ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರಿಗೆ ಟಿ-20 ಸರಣಿ ಹಾಗೂ ಏಕದಿನ ಪಂದ್ಯಗಳ ಸರಣಿಗಳಿಂದ ಬಿಸಿಸಿಐ ವಿಶ್ರಾಂತಿ ನೀಡಿತ್ತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!