ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.
ರಾಜ್ಯದಲ್ಲಿ ಇಂದು ( ಡಿಸೆಂಬರ್ 22 ) ಒಟ್ಟು 78 ಹೊಸ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 78 ಹೊಸ ಪ್ರಕರಣಗಳು ವರದಿಯಾಗಿದ್ದರೆ, 7 ಜನ ಡಿಸ್‌ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 175 ಇದ್ದು, ಕೊನೆಯ 24 ಗಂಟೆಗಳಲ್ಲಿ 2366 ಟೆಸ್ಟ್‌ಗಳು ನಡೆದಿವೆ, 1947 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 419 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.29% ಇದೆ. ಕಳೆದ 24 ಗಂಟೆಗಳಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಒಟ್ಟು 175 ಸಕ್ರಿಯ ಪ್ರಕರಣಗಳ ಪೈಕಿ 162 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 13 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 7 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.