Mysore
22
overcast clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಮೈಸೂರು| ಒಳಾಂಗಣ ಕಾರ್ಯಕ್ರಮಕ್ಕೆ ಮಾಸ್ಕ್ ಕಡ್ಡಾಯ: ಡಿಸಿ ಕೆ.ವಿ ರಾಜೇಂದ್ರ

ಮೈಸೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಕೋವಿಡ್‌ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿಯೂ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಕೋವಿಡ್ ಭೀತಿ ಹಿನ್ನೆಲೆಯಲ್ಲಿ 60 ವರ್ಷ ಮೇಲ್ಪಟ್ಟವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಳಾಂಗಣ ಕಾರ್ಯಕ್ರಮದಲ್ಲಿ ತಪ್ಪದೇ ಮಾಸ್ಕ್‌ ಬಳಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಮಾತನಾಡಿದ ಅವರು, ಮೈಸೂರಿನಲ್ಲಿ ಈವರೆಗೆ ಒಟ್ಟು 7 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. 7ನೇ ಪ್ರಕರಣ ಕಂಡುಬಂದಿರುವ ವ್ಯಕ್ತಿ ಸಹಾ ಅನಾರೋಗ್ಯದಿಂದ ಬಳಲುತ್ತಿರುವವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಕಂಡುಬಂದಿರುವ ಯಾರಿಗೂ ಟ್ರಾವೆಲ್ ಹಿಸ್ಟರಿ ಇಲ್ಲ. ಆದ್ದರಿಂದ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.

ರೋಗ ಲಕ್ಷಣ ಇದ್ದವರಿಗೆ ಮಾತ್ರ ಟೆಸ್ಟಿಂಗ್ ಮಾಡಲಾಗುತ್ತಿದ್ದು, ನಿತ್ಯ ಮೈಸೂರಿನಲ್ಲಿ 70 ಟೆಸ್ಟಿಂಗ್‌ ಮಾಡಲಾಗುತ್ತಿದೆ. ಮಾಡಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದ್ದು, ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಭಂದವಿಲ್ಲ. ಸದ್ಯಕ್ಕೆ ಪ್ರವಾಸಿ ತಾಣಗಳಲ್ಲಿ ಟೆಸ್ಟಿಂಗ್ ಮಾಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!