ಮೈಸೂರು : ಶಾಲಾ ಕಾಲೇಜಿಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ಈ ಹಿಂದೆ ಹೊರಡಿಸಲಾಗಿರುವ ಆದೇಶವನ್ನು ನಮ್ಮ ಸರ್ಕಾರ ಹಿಂಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ಕವಲಂದೆ ಗ್ರಾಮದಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಹಿಜಾಬ್ ಕುರಿತು ಹೇಳಿಕೆ ನೀಡಿದ್ದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕಾನೂನು ಆದೇಶವನ್ನು ನಾವು ವಾಪಾಸ್ ಪಡೆದಿಲ್ಲ ಎಂದು ಸಿಎಂ ಹೇಳಿದ್ದಾರೆ.
ಹಿಜಾಬ್ ಆದೇಶವನ್ನು ಹಿಂಪಡೆಯುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.





