Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ:

ಇಂದು ದೇಶಾದ್ಯಂತ ಜನರು ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತವನ್ನು ಪಕ್ಷಾತೀತ ಮಾನದಂಡವೆಂದು ಗುರುತಿಸುತ್ತಾರೆ. ಪ್ರಣಾಳಿಕೆಯ ಕರಡು ರಚನೆಯಲ್ಲಿ ಅವಕಾಶ ನೀಡಿರುವುದು ಎಐಸಿಸಿಯ ಈ ‘ಕರ್ನಾಟಕ ಮಾದರಿಯ ಮನ್ನಣೆ’ ಎಂದು ನಾನು ಭಾವಿಸುತ್ತೇನೆ.

ಒಂದು ಪಕ್ಷದ ಪ್ರಣಾಳಿಕೆಯು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿಯಲ್ಲ; ಇದು ನಾವು ಜನರಿಗೆ ಮಾಡುವ ಬದ್ಧತೆಯಾಗಿದೆ ಮತ್ತು ಅದನ್ನು ಅನುಷ್ಠಾನಗೊಳಿಸುವುದು ಆಡಳಿತದ ನಿಜವಾದ ಸಾರವಾಗಿದೆ. ನಮ್ಮ ಹಿಂದಿನ ಸರಕಾರ ಪ್ರಣಾಳಿಕೆಯಲ್ಲಿದ್ದ ಶೇ.95ಕ್ಕೂ ಹೆಚ್ಚು ಭರವಸೆಗಳನ್ನು ಜಾರಿಗೊಳಿಸಿ, ಸಮಾನ ಅವಕಾಶ ಹಾಗೂ ಸಮತೋಲಿತ ಅಭಿವೃದ್ಧಿ ಕಲ್ಪಿಸಿ, ಆ ಮೂಲಕ ಜನರ ವಿಶ್ವಾಸ ಗಳಿಸಿತ್ತು. ಪ್ರಸ್ತುತ ಸರಕಾರವೂ ಅದೇ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನಾಡಿನ ಜನತೆಗೂ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳು ದೊರೆಯಲಿ ಎಂದು ಆಶಿಸುತ್ತೇನೆ.

ನನ್ನ ಎಲ್ಲಾ ಕಲ್ಯಾಣ ಮತ್ತು ಮೂಲಸೌಕರ್ಯ ಉಪಕ್ರಮಗಳನ್ನು ಬೆಂಬಲಿಸಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!