ಡಿಸೆಂಬರ್ 25: ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 125 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 30 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 436 ಇದೆ. ಕೊನೆಯ 24 ಗಂಟೆಗಳಲ್ಲಿ 3155 ಟೆಸ್ಟ್‌ಗಳು ನಡೆದಿವೆ, 2072 ಆರ್‌ಟಿಪಿಸಿಆರ್ ಟೆಸ್ಟ್‌ಗಳು ನಡೆದಿವೆ ಹಾಗೂ 1083 ರ್ಯಾಟ್ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.96% ಇದೆ. ಕಳೆದ 24 ಗಂಟೆಗಳಲ್ಲಿ ಹಾಸನ, ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಸಾವಾಗಿದೆ.
ಒಟ್ಟು 436 ಸಕ್ರಿಯ ಪ್ರಕರಣಗಳ ಪೈಕಿ 400 ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡಲಾಗಿದ್ದು, 36 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 7 ಸೋಂಕಿತರು ಐಸಿಯುನಲ್ಲಿದ್ದು, 29 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 13 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 31, ಮಂಡ್ಯದಲ್ಲಿ 3 ಹಾಗೂ ಚಾಮರಾಜನಗರದಲ್ಲಿ 3 ಸಕ್ರಿಯ ಪ್ರಕರಣಗಳಿವೆ.





