Mysore
23
haze

Social Media

ಸೋಮವಾರ, 29 ಡಿಸೆಂಬರ್ 2025
Light
Dark

ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಕ್ರಿಕೆಟಿಗ ಅಂಬಾಟಿ ರಾಯುಡು!

ಹೈದರಾಬಾದ್‌: ಟೀಂ ಇಂಡಿಯಾ ಮಾಜಿ ಆಟಗಾರ ಅಂಬಾಟಿ ರಾಯುಡು ಹೊಸ ಇನ್ನಿಂಗ್ಸ್‌ ಆರಂಭಿಸಿದ್ದು, ಆಂಧ್ರಪ್ರದೇಶ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರು ಆಂಧ್ರಪ್ರದೇಶ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ವಿಜಯವಾಡದಲ್ಲಿ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ರೆಡ್ಡಿ, ಉಪ ಮಖ್ಯಮಂತ್ರಿ ನಾರಾಯಣ ಸ್ವಾಮಿ, ಸಂಸದ ಪೆದ್ದಿ ರೆಡ್ಡಿ, ಮಿಥುನ್‌ ರೆಡ್ಡಿ ಸಮ್ಮುಖದಲ್ಲಿ ವೈಎಸ್‌ಆರ್‌ ಪಕ್ಷಕ್ಕೆ ಸೇರಿದರು.

ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಹಲವು ಅಂತರಾಷ್ಟ್ರೀಯ ಪಂದ್ಯಗಳಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸಿರುವ ಅಂಬಾಟಿ ರಾಯುಡು ಆವರು 2023ರಲ್ಲಿ ಚೆನ್ನೈ ಪರವಾಗಿ ಕೊನೆಯ ಐಪಿಎಲ್‌ ಸೀಸನ್‌ ಆಡಿದ್ದರು. ಇದರಲ್ಲಿ ಚೆನ್ನೈ ಐದನೇ ಬಾರಿಗೆ ಕಪ್‌ ಗೆದ್ದಿತ್ತು. ಕಳೆದ ಜೂನ್‌ ನಲ್ಲಿ ರಾಯುಡು ರಾಜಕೀಯಕ್ಕೆ ಬರುವ ಬಗ್ಗೆ ಘೋಷಣೆ ಮಾಡಿದ್ದರು. ಇದೀಗ ಅವರು ಅಧಿಕೃತವಾಗಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವನ್ನು ಸೇರಿಕೊಂಡಿದ್ದಾರೆ.

https://x.com/YSRCParty/status/1740345886125986014?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!