Mysore
20
mist

Social Media

ಶುಕ್ರವಾರ, 02 ಜನವರಿ 2026
Light
Dark

ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ʼಡಿಕೆಶಿʼ ನಿರ್ಧಾರ!

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ.

ಈ ಕುರಿತಂತೆ ಇಂದು ಬೆಂಗಳೂರಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿದ್ದಾರೆ.

ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಬಿಡಬ್ಲೂಎಸ್ ಎಸ್ ಬಿ, ಬಿಡಿಎ, ಬೆಸ್ಕಾಂ, ಸಂಚಾರಿ ವಿಭಾಗದ ಪೊಲೀಸರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನಡೆಸೋದಕ್ಕೆ ನಿರ್ಧಾರ ಕೈಗೊಂಡಿರುವಂತ ಜನಸ್ಪಂದನಾ ಕಾರ್ಯಕ್ರಮದ ರೂಪು ರೇಷೆಗಳ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ.

ಈ ಸಭೆಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಲ್ಲಿ ಜನಸ್ಪಂದನಾ ಕಾರ್ಯಕ್ರಮದ ದಿನಾಂಕ ಕೂಡ ಘೋಷಣೆಯಾಗಲಿದೆ.

ಅಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರ ಸಮಸ್ಯೆಯನ್ನು ಅವರು ಆಲಿಸಲಿದ್ದಾರೆ. ಅಲ್ಲದೇ ಸ್ಥಳದಲ್ಲೇ ಪರಿಹಾರವನ್ನು ಕೈಗೊಳ್ಳೋದಕ್ಕೆ ಅಧಿಕಾರಿಗಳಿಗೆ ಸೂಚಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!