Mysore
23
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಉತ್ತಮ ಆಹಾರಕ್ಕಾಗಿ ಪಾಕ್‌ಗೆ ಭೇಟಿ ನೀಡಿ: ಕ್ಯಾಪ್ಟನ್‌ ಕೂಲ್‌ ಹೇಳಿದ್ದೇನು!

ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ.

ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ತಮ್ಮ ಅಭಿಮಾನಿಯೊಬ್ಬರಿಗೆ ಧೋನಿ ಸಲಹೆ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಚೆನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಅವರು ತಮಗೆ ಉತ್ತಮ ಆಹಾರಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿ ಎಂದು ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ.

ಅಲ್ಲಿ ಒಳ್ಳೆಯ ಆಹಾರ ಇದೆ ಎಂದು ಹೇಳಿದರೂ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಅಭಿಮಾನಿ ಸಭ್ಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಧೋನಿ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದರು. ಅಲ್ಲಿ ಅವರು ಭಾರತದ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2024ರ ಐಪಿಎಲ್ ಆವೃತ್ತಿಯ ಮೊದಲು ಧೋನಿ ಸಂಪೂರ್ಣವಾಗಿ ಫಿಟ್ ಆಗುತ್ತಾರೆಂಬ ಕುರಿತು ನಾನು ಆಶಾವಾದಿಯಾಗಿದ್ದೇನೆ. ನಮ್ಮ ತಂಡದ ನಾಯಕ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರವೇ ನೆಟ್ ಪಾಕ್ಸಿಸ್ ಆರಂಭಿಸಲಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!