Mysore
27
broken clouds

Social Media

ಬುಧವಾರ, 15 ಜನವರಿ 2025
Light
Dark

ಮುಂದಿನ ವರ್ಷದೊಳಗೆ ರಾಜ್ಯಾದ್ಯಂತ ೩ ಸರ್ಕಾರಿ ಪಬ್ಲಿಕ್‌ ಶಾಲೆ ನಿರ್ಮಾಣ: ಮಧು ಬಂಗಾರಪ್ಪ

ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ ಒಂದರಂತೆ ಒಟ್ಟು 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು 2024 ರೊಳಗೆ 500 ಪಬ್ಲಿಕ್‌ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಸ್ಥಳ ಕೂಡ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ